HEALTH TIPS

ಭಾರತದಲ್ಲಿ ಮತ್ತೆ ಏರಿದ ಕೊರೋನಾ: ದೇಶದಲ್ಲಿಂದು ವರ್ಷದ ಗರಿಷ್ಟ 23,285 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.13 ಕೋಟಿಗೆ ಏರಿಕೆ

       ನವದೆಹಲಿ: ಭಾರತದಲ್ಲಿ ದಿನ ಕಳೆದಂತೆ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ 23,285 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಈ ವರ್ಷದ ಮತ್ತು ಕಳೆದ 78 ದಿನದ ಗರಿಷ್ಟವಾಗಿದೆ. 


       ಕಳೆದ ವರ್ಷ 25 ರಂದು 23,067 ಕೊರೋನಾ ಪ್ರಕರಣ ದಾಖಲಾಗಿದ್ದವು. ಇದೇ ವೇಳೆ ಕಳೆದ 24 ಗಂಟೆಗಳಲ್ಲಿ 117 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1,58,306ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

      ಒಂದೇ ದಿನ 23,285 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,13,08,846ಕ್ಕೆ ಏರಿಕೆಯಾಗಿದೆ.

     ಈ ನಡುವೆ ಒಟ್ಟಾರೆ 1,13,08,846 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 15,157 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,09,53,303ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,97,237 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

      ಭಾರತದಲ್ಲಿ ಒಂದೇ ದಿನ 7,40,345 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 22,49,98,638 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

     ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 2,61,64,920 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries