ನವದೆಹಲಿ: ದೇಶದಲ್ಲಿ ಕೋವಿಡ್-19 ಎರಡನೇ ಅಲೆ ಬರುವ ದಿನಗಳಲ್ಲಿ ತೀವ್ರಗೊಂಡು ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. ಸಾರ್ವಜನಿಕ ಹಾಗೂ ಖಾಸಗಿ ವಲಯದ ಆರೋಗ್ಯ ಸೇವೆಗಳನ್ನು ಇನ್ನಷ್ಟು ಸುಧಾರಿಸಬೇಕಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಐಸಿಯುನಲ್ಲಿ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಈ ವಿದ್ಯಮಾನ ಎಷ್ಟು ದಿನಗಳ ವರೆಗೆ ಮುಂದುವರಿಯುವುದು ಎಂದು ಅಂದಾಜಿಸುವುದು ಕಷ್ಟ ಎಂದೂ ತಜ್ಞರು ಹೇಳಿದ್ದಾರೆ.
'ಐಸಿಯುನಲ್ಲಿ ದಾಖಲಿಸಿರುವ ಕೋವಿಡ್ ರೋಗಿಗಳ ಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದು, ಪ್ಲಾಸ್ಮಾ ಚಿಕಿತ್ಸೆಗೆ ದಿಢೀರ್ ಬೇಡಿಕೆ ಹೆಚ್ಚಾಗಿದೆ' ಎಂದು ನವದೆಹಲಿಯ ಜಾರ್ಜ್ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್‌ನ ಹಿರಿಯ ಸಂಶೋಧಕ ಉಮ್ಮೆನ್ ಜಾನ್ ತಿಳಿಸಿದ್ದಾರೆ.