ನವದೆಹಲಿ: ಬಿಜೆಪಿ ತನ್ನ ವಿಧಾನಸಭಾ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲು ಸಜ್ಜಾಗಿದೆ. ಅನೇಕ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೊದಲ ರ್ಯಾಲಿಗಾಗಿ ಪ್ರಧಾನಿ ನರೇಂದ್ರ ಮೋದಿ ಮಾ.30 ರಂದು ಕೇರಳಕ್ಕೆ ಆಗಮಿಸಲಿದ್ದಾರೆ. ರಾಜ್ಯದ ಎರಡು ರ್ಯಾಲಿಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕೇರಳದಲ್ಲಿ ವಿವಿಧೆಡೆಗಳ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗಳು ಏಪ್ರಿಲ್ 30 ಮತ್ತು ಏಪ್ರಿಲ್ 2 ರಂದು ನಡೆಯಲಿದೆ. ಅಮಿತ್ ಷಾ ಅವರು ಮೂರು ರ್ಯಾಲಿಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ.