ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಶೇ.86. 25 ರಷ್ಟಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ ಗರಿಷ್ಠ 11,141 ಕೊರೋನಾ ಪ್ರಕರಣಗಳೊಂದಿಗೆ ಶೇ. 59.90 ರಷ್ಟು ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ 2,100 ಹೊಸ ಪ್ರಕರಣಗಳೊಂದಿಗೆ ಶೇ. 11.29 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಪಂಜಾಬಿನಲ್ಲಿ 1,043 ಹೊಸ ಪ್ರಕರಣಗಳು, ಕರ್ನಾಟಕದಲ್ಲಿ622 ಪ್ರಕರಣಗಳು ದಾಖಲಾಗಿರುವುದಾಗಿ ಸೋಂಕಿನ ಪ್ರಮಾಣ ಶೇ. 3.3 ರಷ್ಟಿರುವುದಾಗಿ ಸಚಿವಾಲಯ ತಿಳಿಸಿದೆ.
ಗುಜರಾತಿನಲ್ಲಿ ಕಳೆದ 24 ಗಂಟೆಗಳಲ್ಲಿ 575 ಹೊಸ ಪ್ರಕರಣಗಳು ದಾಖಲಾಗಿದ್ದು, ಹೊಸ ಪ್ರಕರಣಗಳ ಶೇಕಡವಾರು ಪ್ರಮಾಣ ಶೇ. 3.09ರಷ್ಟಿದೆ. ತಮಿಳುನಾಡಿನಲ್ಲಿ 567 ಹೊಸ ಪ್ರಕರಣಗಳು ಕಂಡುಬಂದಿದ್ದು, ಒಟ್ಟಾರೇ ಪ್ರಕರಣಗಳ ಸಂಖ್ಯೆ ಶೇ. 3.04 ರಷ್ಟಿದೆ ಕಳೆದ 24 ಗಂಟೆಗಳಲ್ಲಿ ಒಟ್ಟಾರೇ 18, 599 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಸಚಿವಾಲಯ ಹೇಳಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡಿನಲ್ಲಿ ಪ್ರತಿದಿನ ಕೋವಿಡ್-19 ಸಂಖ್ಯೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದಾಗಿ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಸೋಮವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 1,88,747 ಕ್ಕೆ ತಲುಪಿದ್ದು, ಒಟ್ಟಾರೇ ಸೋಂಕಿನ ಪ್ರಮಾಣ ಶೇ.1.68 ರಷ್ಟಿದೆ.