HEALTH TIPS

75ನೇ ಸ್ವಾತಂತ್ರ್ಯೋತ್ಸವ: ಕೇಂದ್ರ ಸರ್ಕಾರದಿಂದ 'ಅಮೃತ ಮಹೋತ್ಸವ'ಕ್ಕೆ ಸಿದ್ಧತೆ

            ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ನಡೆಯುವ 'ಅಮೃತ ಮಹೋತ್ಸವ'ದಲ್ಲಿ ಎಲ್ಲ ಸಂಸದರು ಮತ್ತು ಜನಪ್ರತಿನಿಧಿಗಳು ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮನವಿ ಮಾಡಿದ್ದಾರೆ.

         ಬಿಜೆಪಿಯ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ದೇಶದ 75 ಸ್ಥಳಗಳಲ್ಲಿ 75 ವಾರಗಳವರೆಗೆ ಭವ್ಯ ಉತ್ಸವ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಬುಧವಾರ ಇಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಬಹುತೇಕ ಒಂದು ವರ್ಷದ ಬಳಿಕ ಈ ಸಂಸದೀಯ ಪಕ್ಷದ ಸಭೆ ನಡೆದಿದೆ.

       ಅಮೃತ ಮಹೋತ್ಸವಕ್ಕೆ ಮಾರ್ಚ್‌ 12ರಂದು ಗುಜರಾತಿನ ಸಬರಮತಿ ಆಶ್ರಮದಲ್ಲಿ ಚಾಲನೆ ದೊರೆಯಲಿದೆ ಎಂದು ಅವರು ಹೇಳಿದರು.

       ಕೋವಿಡ್‌-19ರ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಸಂಸತ್ತಿನ ಸದಸ್ಯರು ತೊಡಗಿಕೊಳ್ಳಬೇಕು. ಜನರಿಗೆ ಲಸಿಕೆ ಕೊಡಿಸಲು ನೆರವಾಗಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದರು.

ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ಅವರ ಸಮರ್ಥ ಮತ್ತು ಪರಿಣಾಮಕಾರಿ ನಾಯಕತ್ವವನ್ನು ಶ್ಲಾಘಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು.

        ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಿದೆ ಮತ್ತು ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಸಹಾಯ ಮಾಡಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries