ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಖಾಸಗಿ ಬಸ್ಸೊಂದು ಬುಧವಾರ ಆಳವಾದ ಕಮರಿಗೆ ಬಿದ್ದು 8 ಮಂದಿ ಮೃತಪಟ್ಟಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
'ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಈ ಬಸ್ ಚಂಬಾದಿಂದ ಟೀಸಾಗೆ ಬರುತ್ತಿದ್ದ ವೇಳೆ ಟೀಸಾ ಸಮೀಪದ ಆಳವಾದ ಕಮರಿಗೆ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಚಂಬಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಅರುಲ್ ಕುಮಾರ್ ಹೇಳಿದರು.