ತಿರುವನಂತಪುರ: ಆದ್ಯತೆಯೇತರ ವಿಭಾಗಗಳಿಗೆ 10 ಕೆಜಿ ಅಕ್ಕಿಯನ್ನು 15 ರೂ.ಗೆ ನೀಡುವ ನಿರ್ಧಾರವನ್ನು ನಿರ್ಬಂಧಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶಾನುಸಾರ ಈ ನಿಯಂತ್ರಣ ಹೇರಲಾಗಿದೆ.
ಚುನಾವಣಾ ನೀತಿ ಸಂಹಿತೆ ಇರುವುದರಿಂದ ಅಕ್ಕಿ ವಿತರಣೆಯನ್ನು ನಿಲ್ಲಿಸಲಾಯಿತು. ಆದರೆ, ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ಅಕ್ಕಿ ವಿತರಿಸಲು ಸರ್ಕಾರ ಆದೇಶಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಫೆಬ್ರವರಿ 4 ರಂದು ಸರ್ಕಾರದ ಆದೇಶ ಹೊರಡಿಸಲಾಗಿತ್ತು.