HEALTH TIPS

ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪ ಜಿಲ್ಲಾ ಸಮ್ಮೇಳನ:

Top Post Ad

Click to join Samarasasudhi Official Whatsapp Group

Qries

Qries


         ಮಂಜೇಶ್ವರ : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಮಂಜೇಶ್ವರ ಉಪಜಿಲ್ಲಾ ಘಟಕದ ಸಮ್ಮೇಳನವು ಮುಳಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. 


          ಕೊರೋನ ಕಾರಣದಿಂದ ಕೋವಿಡ್ ನಿಯಂತ್ರಣಾ ಮಾನದಂಡಗಳನ್ನು ಅನುಸರಿಸಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮಕ್ಕೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ ಧ್ವಜಾರೋಹಣಗೈಯುವ ಮೂಲಕ ಚಾಲನೆಯಿತ್ತರು. ಬಳಿಕ ನಡೆದ ಪ್ರತಿನಿಧಿ ಸಮ್ಮೇಳನದಲ್ಲಿ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಕೇಂದ್ರ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ಕೆ. ಆರ್, ಉಪಾಧ್ಯಕ್ಷರಾದ  ಶ್ರೀನಿವಾಸ ರಾವ್ ಪಿ. ಬಿ, ಕೋಶಾಧಿಕಾರಿಯಾದ ಪದ್ಮಾವತಿ ಎಂ, ಕಾರ್ಯದರ್ಶಿ ಸುಕೇಶ್ ಎ, ಮಂಜೇಶ್ವರ ಉಪಜಿಲ್ಲಾ ಘಟಕದ ಉಪಾಧ್ಯಕ್ಷೆ ಸುನಿತಾ ಎ ಉಪಸ್ಥಿತರಿದ್ದರು. ಮಂಜೇಶ್ವರ ಉಪಜಿಲ್ಲಾ ಘಟಕದ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ವಾರ್ಷಿಕ ವರದಿ ವಾಚಿಸಿದರೆ, ಕೋಶಾಧಿಕಾರಿ ಜೀವನ್ ಕುಮಾರ್ ಲೆಕ್ಕ ಪತ್ರ ಮಂಡಿಸಿದರು. ಬಳಿಕ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಮೀಯಪದವು ಪ್ರೌಢಶಾಲೆಯ ರಾಜರಾಮ್ ರಾವ್, ಮಜಿಬೈಲ್ ಶಾಲೆಯ ಚಿತ್ರಾವತಿ ಮೊದಲಾದವರು ಅಭಿಪ್ರಾಯ ಮಂಡಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ಕೆ. ಆರ್ ಸಂಶಯಗಳಿಗೆ ಉತ್ತರವನ್ನಿತ್ತರು. ಮಂಜೇಶ್ವರ ಉಪಜಿಲ್ಲಾ ಘಟಕದ ಉಪಕಾರ್ಯದರ್ಶಿ ಕವಿತಾ ಕೂಡ್ಲು ಸ್ವಾಗತಿಸಿ, ಸದಸ್ಯರಾದ ಶ್ರೀರಾಮ ಕೆದುಕೋಡಿ ವಂದಿಸಿದರು. ಪ್ರತಿನಿಧಿ ಸಮ್ಮೇಳನವನ್ನು ಅಶೋಕ್ ಕುಮಾರ್ ಕೊಡ್ಲಮೊಗರು ನಿರೂಪಿಸಿದರು.


         ಬಳಿಕ ನಡೆದ ಉಪಜಿಲ್ಲಾ ಸಮ್ಮೇಳನದ ಉದ್ಘಾಟನೆಯನ್ನು ನಿವೃತ್ತ ಶಿಕ್ಷಣ ಉಪನಿರ್ದೇಶಕರಾದ ಶ್ರೀನಿವಾಸ ಕೆ ನೆರವೇರಿಸಿ 'ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳನ್ನು ಎದುರಿಸಲು ಕನ್ನಡ ಮಾಧ್ಯಮ ಅಧ್ಯಾಪಕರ ಸಂಘಟನೆ ಸಮರ್ಪಕವಾಗಿ ಕಾರ್ಯಾಚರಿಸುತ್ತಿದ್ದು, ಈ ಸಂಘಟನೆಗೆ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ. ಸಂಘಟನೆಯು ಕೆಲವೊಂದು ಔಚಿತ್ಯ ಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ' ಎಂದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಕೆ ಅಧ್ಯಕ್ಷತೆ ವಹಿಸಿದ್ದರು. ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿಗಳಾದ ನಂದಿಕೇಶನ್ ಎನ್ ರವರು 'ಕೊರೋನ ಸಂದಿಗ್ಧ ಪರಿಸ್ಥಿತಿಯಲ್ಲಿ ಆನ್ಲೈನ್ ಕ್ಲಾಸುಗಳು ನಡೆಯುವ ಸಂದರ್ಭದಲ್ಲಿ  ಕನ್ನಡ ಮಾಧ್ಯಮದ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗುವಂತೆ ಮಾಡಲು, ಆನ್ಲೈನ್ ಕ್ಲಾಸುಗಳನ್ನು ಮಾಡಲು ಕನ್ನಡ ಅಧ್ಯಾಪಕರು ಮುಂದೆ ಬಂದುದು  ನಿಜಕ್ಕೂ ಅಭಿನಂದನೀಯ' ಎಂದರು.  ಮಂಜೇಶ್ವರ ಬಿ. ಆರ್. ಸಿ ಯ ಬ್ಲಾಕ್ ಪ್ರೋಗ್ರಾಂ ಕೋರ್ಡಿನೇಟರ್ ಆದರ್ಶ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ, ಕೇಂದ್ರ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ಕೆ. ಆರ್, ಕೋಶಾಧಿಕಾರಿ ಪದ್ಮಾವತಿ ಎಂ, ಮುಳಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪುಷ್ಪಲತಾ ಎ ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀನಿವಾಸ ರಾವ್ ಪಿ. ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಳೆದ ಕೊರೋನ ಲಾಕ್ ಡೌನ್ ಸಮಯದಲ್ಲಿ ಮಂಜೇಶ್ವರ ಉಪಜಿಲ್ಲಾ ಘಟಕದ ವತಿಯಿಂದ ನಡೆದ ಆನ್ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಂಜೇಶ್ವರ ಉಪಜಿಲ್ಲಾ ಘಟಕದ ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಉಪಾಧ್ಯಕ್ಷೆಯಾದ ಸುನಿತಾ ಎ ವಂದಿಸಿದರು. ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಸದಸ್ಯರಾದ ಜಬ್ಬಾರ್ ಬಿ ನಿರೂಪಿಸಿದರು.


          ಇದೇ ಸಂದರ್ಭದಲ್ಲಿ ಮಂಜೇಶ್ವರ ಉಪಜಿಲ್ಲಾ ಘಟಕದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬೆರಿಪದವು ಎ. ಎಲ್. ಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಉಮೇಶ್ ಕೆ, ಉಪಾಧ್ಯಕ್ಷರಾಗಿ ಬಂಗ್ರ ಮಂಜೇಶ್ವರದ ಸರಕಾರಿ ಉನ್ನತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಸುನಿತಾ ಎ ಮತ್ತು ಪೈವಳಿಕೆ ನಗರ ಸರಕಾರಿ ಉನ್ನತ ಪ್ರೌಢ ಶಾಲಾ ಅಧ್ಯಾಪಕ ಗೋಪಣ್ಣ ಎಂ, ಕಾರ್ಯದರ್ಶಿಯಾಗಿ ಸಜಂಕಿಲ ಎಸ್. ಡಿ. ಪಿ. ಎ. ಯು. ಪಿ ಶಾಲೆಯ ಅಧ್ಯಾಪಕರಾದ ಶ್ರೀರಾಮ ಕೆದುಕೋಡಿ, ಜತೆ ಕಾರ್ಯದರ್ಶಿಗಳಾಗಿ ಕುಂಜತ್ತೂರಿನ ಸರಕಾರಿ ಉನ್ನತ ಪ್ರೌಢ ಶಾಲೆಯ ಅಧ್ಯಾಪಕಿ ಕವಿತಾ ಕೂಡ್ಲು ಮತ್ತು ಕೋಳ್ಯೂರು ಶ್ರೀ ಶಂಕರನಾರಾಯಣ ಎ. ಎಲ್. ಪಿ. ಶಾಲೆಯ ಅಧ್ಯಾಪಕರಾದ ಕೃಷ್ಣ ನಾಯ್ಕ್, ಕೋಶಾಧಿಕಾರಿಯಾಗಿ ಆನೆಕಲ್ಲು ಎ.ಯು.ಪಿ ಶಾಲೆಯ ಅಧ್ಯಾಪಕರಾದ ಜೀವನ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಜೊತೆಗೆ ಕಾರ್ಯಕಾರಿ ಸಮಿತಿ ಸದಸ್ಯರು, ಕೇಂದ್ರ ಸಮಿತಿಯ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ಲೆಕ್ಕ ಪರಿಶೋಧಕರನ್ನೂ ಆಯ್ಕೆ ಮಾಡಲಾಯಿತು. 


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries