ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೋಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ ರೈಲ್ವೇ ಕ್ರಿಕ್ ಬಳಿ ಪತ್ತೆಯಾಗಿದೆ. ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾದಿಕೊಂಡಿರಬಹುದು ಎಂದು ಪೋಲೀಸರು ಶಂಕಿಸಿದ್ದಾರೆ.
ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಸ್ಕಾರ್ಪಿಯೋ ಕಾರನ್ನು ಮುಕೇಶ್ ಅಂಬಾನಿ ಮನೆ ಮುಂದೆ ನಿಲ್ಲಿಸಲಾಗಿತ್ತು. ಈ ಮೂಲಕ ದೊಡ್ಡ ಅನಾಹುತ ಸೃಷ್ಟಿಸಲು ಸಂಚು ರೂಪಿಸಲಾಗಿತ್ತು. ಆದರೆ ಪೋಲೀಸರು ಕಾರನ್ನು ಪತ್ತೆ ಹಚ್ಚಿ ದೊಡ್ಡ ಅನಾಹುತ ತಪ್ಪಿಸಿದ್ದರು.
ಇದರ ಬೆನ್ನಲ್ಲೇ ಜೈಶ್ ಉಲ್ ಹಿಂದ್ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿದ್ದು ಪತ್ರವೊಂದನ್ನು ಪ್ರಕಟಿಸಿರುವುದಾಗಿ ವರದಿಯಾಗಿತ್ತು. ಇದರ ಬೆನ್ನತ್ತಿದ ಪೋಲೀಸರಿಗೆ ತನಿಖೆ ವೇಳೆ ಸಂಘಟನೆಯ ಪತ್ರವೇ ನಕಲಿ ಎಂದು ತಿಳಿದುಬಂತು.