ತಿರುವನಂತಪುರ: ಕೋವಿಡ್ ಎರಡನೇ ತರಂಗವು ರಾಜ್ಯದಲ್ಲಿ ಹರಡುವ ಸಾಧ್ಯತೆಯ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಚ್ಚರಿಸಿದ್ದಾರೆ. ಎಲ್ಲರೂ ಜಾಗರೂಕರಾಗಿರಿ ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿರುವರು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಆದಷ್ಟು ಬೇಗ ಲಸಿಕೆ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನ ಗತಿಯಲ್ಲಿ ಕ್ಷೀಣಿಸುತ್ತಿದ್ದರೂ, ತಮಿಳುನಾಡು, ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕೋವಿಡ್‍ನ ಮುಂದಿನ ಅಲೆಯ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಎಚ್ಚರಿಕೆ ಮಹತ್ವ ಪಡೆದಿದೆ. ಜೊತೆಗೆ ಚುನಾವಣೆಯೂ ಸನ್ನಿಹಿತವಾಗಿರುವುದರಿಂದ ಗಮನಾರ್ಹವೂ ಆಗಿದೆ. ಭಾರತದ ಎಂಟು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ.