ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವವು ದೇಲಂಪಾಡಿ ಬೃಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬೆಳಗ್ಗೆ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಬಲಿವಾಡು ಕೂಟದೊಂದಿಗೆ ಅನ್ನ ಸಂತರ್ಪಣೆ ಜರುಗಿತು. ರಾತ್ರಿ ವಿವಿಧ ಭಜನಾ ಸಂಘಗಳಿಂದ ಭಜನೆ, ಕಾರ್ತಿಕಪೂಜೆ, ರಂಗ ಪೂಜೆ, ಪ್ರಸಾದ ವಿತರಣೆಯೊಂದಿಗೆ ಉತ್ಸವ ಸಂಪನ್ನಗೊಂಡಿತು.