ತಿರುವನಂತಪುರ: ಕೇರಳ ರಾಜ್ಯವು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಸೋಮವಾರ ಆರೋಪಿಸಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ಕಾನೂನು ಜಾರಿ ಮಾಡಲಾಗುವುದು ಎಂದರು ಹೇಳಿದರು.
ಪಕ್ಷದ ಪರವಾಗಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಿರುವ ಅವರು, ರಾಜ್ಯದ ದೇವಾಲಯಗಳನ್ನು ನಿರ್ವಹಿಸುವ ದೇವಸ್ವಂ ಮಂಡಳಿಗಳನ್ನು ರದ್ದುಪಡಿಸಿ ಭಕ್ತರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು. 'ದೇವಸ್ವಂ ಮಂಡಳಿಗಳು ಸಿಪಿಎಂ ಪಕ್ಷದ ಚಟುವಟಿಕೆಯ ಕೇಂದ್ರಗಳಾಗಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವುಗಳನ್ನು ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದರು.