ಬದಿಯಡ್ಕ: ಕುಂಟಿಕಾನ ಹಿರಿಯ ಬುನಾದಿ ಶಾಲೆಗೆ ಅಲ್ಲಿನ ರಕ್ಷಕ ಶಿಕ್ಷಕ ಸಂಘ ಹಾಗೂ ಮಾತೃಸಂಘ ಒದಗಿಸಿಕೊಟ್ಟ ಪ್ರಿಂಟರ್ ಹಾಗೂ ಧ್ವನಿವರ್ಧಕ ವ್ಯವಸ್ಥೆಯನ್ನು ಶಾಲೆಗೆ ಹಸ್ತಾಂತರಿಸಲಾಯಿತು.
ಶುಕ್ರವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಜಸ್ಟಿನ್ ಜೋಸ್, ಮಾತೃಸಂಘದ ಅಧ್ಯಕ್ಷೆ ಪ್ರೇಮಲತಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋನ್ ಡಿಸೋಜ, ನಿವೃತ್ತ ಮುಖ್ಯೋಪಾಧ್ಯಾಯ ಪಿ. ಮಹಾಲಿಂಗೇಶ್ವರ ಭಟ್, ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಶರ್ಮ, ಮುಖ್ಯೋಪಾಧ್ಯಾಯ ವೆಂಕಟ್ರಾಜ ವಾಶೆ, ಬ್ಲಾಕ್ ಪಂಚಾಯಿತಿ ಸದಸ್ಯೆ ಜಯಂತಿ, ಅಧ್ಯಾಪಕರುಗಳಾದ ಗಣೇಶ್ ಭಟ್ ಕೆ., ಉಣ್ಣಿಕೃಷ್ಣನ್ ಟಿ.ಒ., ಕೃಷ್ಣನ್ ನಂಬೂದಿರಿ ಹಾಗೂ ಅಧ್ಯಾಪಕರು ಪಾಲ್ಗೊಂಡಿದ್ದರು.