ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಭಾನುವಾರ ಮಹಾಮಾರಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಓಂ ಬಿರ್ಲಾ ಅವರನ್ನು ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಓಂ ಬಿರ್ಲಾ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸ್ಥಿತಿ ಕುರಿತು ಏಮ್ಸ್ ಹೇಳಿಕೆ ನೀಡಿದ್ದು, ಮಾರ್ಚ್ 19 ರಂದು ಓಂ ಬಿರ್ಲಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮಾರ್ಚ್ 20 ರಂದು ಏಮ್ಸ್ ಕೋವಿಡ್ ಸೆಂಟರ್'ಗೆ ದಾಖಲಾಗಿದ್ದಾರೆ, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.