ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಒಂದೇ ಒಂದು ಹೊಸ ಕೋವಿಡ್ 19 ಪ್ರಕರಣ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಕೇವಲ ಮೂರು ಸಕ್ರಿಯ ಪ್ರಕರಣಗಳಿದ್ದು, 16,780 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,839 ಆಗಿದೆ ಎಂದು ರಾಜ್ಯ ಸರ್ವೈಲೆನ್ಸ್ ಅಧಿಕಾರಿ ಡಾ. ಲೊಬ್ಸಾಂಗ್ ಜಂಪಾ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಇದುವರೆಗೆ 56 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇದುವರೆಗೆ 4,08,728 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಜಂಪಾ ತಿಳಿಸಿದ್ದಾರೆ.