HEALTH TIPS

ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅವಕಾಶ: ಕೇಂದ್ರಕ್ಕೆ ನೋಟಿಸ್‌

          ನವದೆಹಲಿ: ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿರುವ ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೊರ್ಟ್‌ ಸೋಮವಾರ ನಿರ್ದೇಶನ ನೀಡಿದೆ.


           ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ಪೀಠವು ಈ ನಿರ್ದೇಶನ ನೀಡಿದೆ.

ಆಯುಷ್‌ ಸಚಿವಾಲಯ, ಭಾರತೀಯ ಔಷಧಗಳ ಕೇಂದ್ರೀಯ ಮಂಡಳಿ (ಸಿಸಿಐಎಂ) ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೂ ಪೀಠವು ನೋಟಿಸ್‌ ಜಾರಿಗೊಳಿಸಲಾಗಿದೆ.

        ಹಾನಿಕಾರಕವಲ್ಲದ ಗಡ್ಡೆ ತೆಗೆಯುವುದು, ಗ್ಯಾಂಗ್ರಿನ್‌ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಸ್ನಾತಕೋತ್ತರ ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಅನುಮತಿ ನೀಡಿತ್ತು. ಈ ಸಂಬಂಧ ಸಿಸಿಐಎಂ ಅಧಿಸೂಚನೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಐಎಂಎ ಆಕ್ಷೇಪ ವ್ಯಕ್ತಪಡಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries