ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್‌ಗೆ ಮಾಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ ಅವರು, ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನಗೆ ಕೊರೋನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೋನಾ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೋನಾ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ತಿಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್ಗೂ ಕೊರೋನಾ ಸೋಂಕು ತಗುಲುವ ಮೂಲದ ದೇಶದ ಇನ್ನೋರ್ವ ತಾರೆ ಈ ಸೋಂಕಿಗೆ ತುತ್ತಾದಂತಾಗಿದೆ. ಈಗಾಗಲೇ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ನಟ ಮಾಧವನ್, ಪರೇಶ್ ರಾವಲ್, ನಟಿ ತಮನ್ನಾ ಭಾಟಿಯಾ, ನಟ ಅರ್ಜುನ್ ಕಪೂರ್, ಬಾಲಿವುಡ್ ನಟರಾದ ರಣಬೀರ್ ಕಪೂರ್, ಮನೋಜ್ ಬಾಜಪೇಯಿ, ಸಿದ್ಧಾಂತ್ ಚತುರ್ವೇದಿ, ತಾರಾ ಸುತಾರಿಯಾ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮುಂತಾದವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.