ಮಂಜೇಶ್ವರ: ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಉದ್ಯಾವರ ಮಾಡ ಪರಿಸರದಿಂದ ಬೈಕ್ ರ್ಯಾಲಿಯ ಮೂಲಕ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮಂಜೇಶ್ವರ ಬ್ಲಾಕ್ ಪಂಚಾಯತಿ ಕಾರ್ಯಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಮತ್ತು ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಉತ್ತರ ವಲಯ ಉಪಾಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಯುವಮೋರ್ಚಾ ರಾಜ್ಯ ಅಧ್ಯಕ್ಷ ಪ್ರಪುಲ್ಲ ಕೃಷ್ಣ, ಬಿಜೆಪಿ ಮಂಡಲಾಧ್ಯಕ್ಷ ಮಣಿಕಂಠ ರೈ ಪಟ್ಲ, ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್ ರೈ, ಬ್ಲಾಕ್ ಪಂಚಾಯತಿ ಸದಸ್ಯರಾದ ಸರೋಜ ಆರ್.ಬಲ್ಲಾಲ್, ಮತ್ತು ಅನಿಲ್ ಕುಮಾರ್ ಕೆ. ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು. ಮಂಜೇಶ್ವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಠೇವಣಿ ಪಾವತಿಸಿದ್ದಾರೆ.