ಕಾಸರಗೋಡು: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಕಾಸರಗೋಡು ಕೂಡ್ಲು ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀದೇವರಿಗೆ ವಿಶೇಷ ಪೂಜೆ ಗುರುವಾರ ನಡೆಯಿತು. ಕೋವಿಡ್ ಮಾನದಂಡ ಪಾಲನೆಯೊಂದಿಗೆ ಶ್ರೀಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀದೇವರ ಪೂಜಾಕಾರ್ಯದಲ್ಲಿ ಪಾಲ್ಗೊಂಡಿದ್ದರು. ರುದ್ರಾಭಿಷೇಕದೊಂದಿಗೆ ಶ್ರೀದೇವರಿಗೆ ವಿಶೇಷ ಪೂಜೆ ನಡೆಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ ತಂಡಗಳಿಂದ ಭಜನೆ ನಡೆಯಿತು.