ತ್ರಿಶೂರ್: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳನ್ನು ಉಲ್ಲೇಖಿಸಿ ಅಮಿತ್ ಶಾ ಅವರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಏಕೆ ಉತ್ತರಿಸಲು ಸಿದ್ಧರಿಲ್ಲ ಎಂದು ಪ್ರಶ್ನಿಸಿದರು. ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ಅವರು ತ್ರಿಶೂರ್ ಗೆ ಭೇಟಿ ನೀಡಿದ ವೇಳೆ ಈ ಬಗ್ಗೆ ಟೀಕೆ ವ್ಯಕ್ತಪಡಿಸಿದರು.
ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಮಹಿಳೆಯನ್ನು ಸರ್ಕಾರಿ ಸೇವೆಗೆ ನೇಮಕ ಮಾಡಿರುವುದು ಸೇರಿದಂತೆ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸ್ಪಂದಿಸಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎತ್ತಿದ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ಈ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಪಡೆಯುವ ಹಕ್ಕು ಜನಸಾಮಾನ್ಯರಿಗಿದೆ. ಸ್ವಪ್ನಾ ಸುರೇಶ್ ಅವರ ನೇಮಕ ಮತ್ತು ಅವರ ವಿದೇಶ ಪ್ರವಾಸಗಳ ಬಗ್ಗೆ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಬೇಕು ಎಂದು ಜೋಶಿ ಹೇಳಿದರು. ಆಯ್ಕೆ ಸಮಿತಿ ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್, ಕೇಂದ್ರ ಸಚಿವ ವಿ ಮುರಳೀಧರನ್ ಮತ್ತು ಇ ಶ್ರೀಧರನ್ ಸೇರಿದಂತೆ ರಾಜ್ಯ ನಾಯಕರು ಭಾಗವಹಿಸಿದ್ದರು.
ಪ್ರತಿ ಕ್ಷೇತ್ರದ ಅಭ್ಯರ್ಥಿಗಳ ಕಿರುಪಟ್ಟಿಯು ಸರಾಸರಿ ಮೂರು ಅಭ್ಯರ್ಥಿಗಳನ್ನು ಒಳಗೊಂಡಿರುತ್ತದೆ. ನಾಳೆ ಸಂಜೆಯೊಳಗೆ ಅಂತಿಮ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ.