ತಿರುವನಂತಪುರ: ಹೈಯರ್ ಸೆಕೆಂಡರಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗುವುದು ಎಂದು ತಿಳಿದುಬಂದಿದೆ.
ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೆ.ಎಸ್.ಟಿ.ಎ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಗಳನ್ನು ಅತಿ ಉಷ್ಣ ಹವೆಯ ಏಪ್ರಿಲ್-ಮೇ ತಿಂಗಳಿಗೆ ಮುಂದೂಡುವುದು ಅವೈಜ್ಞಾನಿಕ ಎಂದು ಶಿಕ್ಷಕರು ಮತ್ತು ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ ಸರ್ಕಾರ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾರ್ಚ್ 17 ರಂದು ಪ್ರಾರಂಭವಾಗಲಿರುವ ಎಸ್.ಎಸ್.ಎಲ್.ಸಿ. ಮತ್ತು ಪ್ಲಸ್ ಟು ಪರೀಕ್ಷೆಗಳನ್ನು ಏಪ್ರಿಲ್‍ಗೆ ಕೋವಿಡ್ ಹೆಚ್ಚಳ ಮತ್ತು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗುವುದೆಂದು ಅನಧಿಕೃತ ಮೂಲಗಳಿಂದ ತಿಳಿದುಬಂದಿದೆ. ಆದಾಗ್ಯೂ, ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಚುನಾವಣೆಗಳನ್ನು ಉಲ್ಲೇಖಿಸಿ ಅತಿ ಉಷ್ಣಾಂಶದ ಏಪ್ರಿಲ್-ಮೇ ತಿಂಗಳುಗಳಿಗೆ ಪರೀಕ್ಷೆ ಮುಂದೂಡುವ ಬಗ್ಗೆ ಶಿಕ್ಷಕರು ಟೀಕೆ ವ್ಯಕ್ತಪಡಿಸಿದ್ದಾರೆ.
ನಿಗದಿತ ದಿನದಂದು ಪರೀಕ್ಷೆಗಳನ್ನು ನಡೆಸದಿದ್ದರೆ ಎಲ್ಲವೂ ಅಪಾಯಕ್ಕೆ ಸಿಲುಕುತ್ತದೆ ಎಂಬ ಆತಂಕವೂ ವಿದ್ಯಾರ್ಥಿಗಳಲ್ಲಿದೆ. ಇದು ಮುಂದಿನ ವರ್ಷದ ಪ್ರವೇಶ ಪ್ರಕ್ರಿಯೆಯ ಮೇಲೂ ಪರಿಣಾಮ ಬೀರುತ್ತದೆ.