ಕೋಲ್ಕತ್ತಾ: ಎರಡು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ಸೇರಿಕೊಂಡ ಬಿಜೆಪಿ ಮಾಜಿ ನಾಯಕ ಯಶ್ವಂತ್ ಸಿನ್ಹಾ ಅವರನ್ನು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ
ಅವರನ್ನು ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ.
ಈ ಆದೇಶವನ್ನು ಇಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಸುಬ್ರತಾ ಬಕ್ಷಿ ಹೊರಡಿಸಿದ್ದಾರೆ.
ಸಿನ್ಹಾ ಟಿಎಂಸಿ ಪರ ಪ್ರಚಾರ ನಡೆಸಲಿದ್ದಾರೆ ಮತ್ತು ತಾವು ಮಮತಾ ಬ್ಯಾನರ್ಜಿಯವರೊಂದಿಎಗ್ ಸೇರಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪಕ್ಷ ಗೆಲುವು ಸಾಧಿಸುವುದಕ್ಕಾಗಿ ಶ್ರಮಿಸುತ್ತೇನೆ ಎಂದು ಹೇಳಿಕೊಂಡಿದ್ದರು.
ಸಿನ್ಹಾ ಅವರ ಈ ನಡೆ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಪರಿಣಾಮ ಬೀರುವುದೆಂದು ನಿರೀಕ್ಷಿಸಲಾಗಿದೆ.