ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.
ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ವಿಶ್ವವಿದ್ಯಾನಿಲಯದ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಇತರ ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ""ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯವನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್ಟಿ-ಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ'' ಎಂದು ಮಾಹಿತಿ ನೀಡಿದರು.