ಕಾಸರಗೋಡು: ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ನಡೆದ ಭಿನ್ನಮತ ಸ್ಫೋಟಕ್ಕೆ ಸಂಸದ ರಾಜಮೋಹನ್ ಉಣ್ಣಿತ್ತಾನ್ ಪ್ರತಿಕ್ರಿಯೆ ನೀಡಿದ್ದು, ಅಭ್ಯರ್ಥಿಗಳ ಪಟ್ಟಿ ಬಹಿರಂಗಗೊಳಿಸುವ ಮೊದಲೇ ಹೇಗೆ ಪ್ರತಿಭಟಿಸಬಹುದು ಎಂದು ಕೇಳಿರುವರು. ತಾನು ಅಭ್ಯರ್ಥಿಗಳ ಆಯ್ಕೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವೇಳೆ ಅವರು ಈ ವಿಷಯವನ್ನು ತಿಳಿಯಪಡಿಸಿದ್ದಾರೆ.
ಹೈಕಮಾಂಡ್ ನಿರ್ಧಾರವನ್ನು ವಿರೋಧಿಸುವವರ ಧ್ವನಿ ಅಡಗಿಸಬೇಕು. ಅಭ್ಯರ್ಥಿಯನ್ನು ಸೋಲಿಸಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.
ಕಾಂಗ್ರೆಸ್ ಈವರೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. 81 ಅಭ್ಯರ್ಥಿಗಳ ವಿಷಯದಲ್ಲಿ ಹೈಕಮಾಂಡ್ ಅಂದಾಜು ನಿರ್ಧಾರ ಕೈಗೊಂಡಿದೆ. ಹತ್ತು ಜನರನ್ನು ನಿರ್ಧರಿಸಬೇಕಾಗಿದೆ ಎಂದರು.
ಅಭ್ಯರ್ಥಿಗಳ ಪಟ್ಟಿ ಘೋಷಿಸುವ ಮೊದಲು ರಹಸ್ಯ ಸಭೆ ಏಕೆ ಸೇರಬೇಕು. ಕೆಪಿಸಿಸಿ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ಅವರು ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಹೈಕಮಾಂಡ್ ನಿರ್ಧಾರವನ್ನು ವಿರೋಧಿಸುವವರು ತಾವು ಕುಳಿತಿರುವ ರೆಂಬೆಯನ್ನೇ ಕತ್ತರಿಸುತ್ತಿದ್ದಾರೆ ಎಂದು ರಾಜಮೋಹನ್ ಉಣ್ಣಿತ್ತಾನ್ ಹೇಳಿದರು.