ತಿರುವನಂತಪುರ: ಚುನಾವಣೆ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪತ್ರಿಕಾಗೋಷ್ಠಿ ನಡೆಸಿ ವಿವಿಧ ಘೋಷಣೆಗಳನ್ನು ಮಾಡಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಪ್ರತಿಪಕ್ಷ ಮುಖಂಡ ರಮೇಶ್ ಚೆನ್ನಿತ್ತಲ ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಟೀಕಾರಾಮ್ ಮೀನಾ ಅವರಿಗೆ ಚೆನ್ನಿತ್ತಲ ದೂರು ನೀಡಿದ್ದಾರೆ.
ಫೆಬ್ರವರಿ 4 ಮತ್ತು 6 ರಂದು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಹೊಸ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ಘೋಷಿಸಿರುವರು.ಚುನಾವಣೆ ಘೋಶಿಸಿದ ಬಳಿಕ ಮುಖ್ಯ ಕಾರ್ಯದರ್ಶಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾತ್ರ ಸರ್ಕಾರದ ಹೊಸ ನೀತಿ ಅಥವಾ ಕಾರ್ಯಕ್ರಮದ ಬಗ್ಗೆ ಮಾತನಾಡಬಹುದು. ಆದರೆ ಮುಖ್ಯಮಂತ್ರಿ ಇದನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಚೆನ್ನಿತ್ತಲ ದೂರಿದ್ದಾರೆ.
ಸರ್ಕಾರದ ನಿಯಮಿತ ಪ್ರಕಟಣೆಗಳ ಹೊರತಾಗಿಯೂ, ಅವುಗಳನ್ನು ಮುಖ್ಯ ಕಾರ್ಯದರ್ಶಿಯ ಮೂಲಕ ಮಾತ್ರ ಮಾಡಬಹುದಾಗಿದೆ. ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚೆನ್ನಿತ್ತಲ ವಿನಂತಿಸಿರುವರು.