ನವದೆಹಲಿ: ಮುಂಬರುವ ದಿನಗಳಲ್ಲಿ ಚುನಾವಣೆಯಿರುವ ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೋನಾ ವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೆÇೀಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಫೆÇೀಟೋಗಳನ್ನು ತೆಗೆದುಹಾಕಬೇಕೆಂದು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಕಳೆದ ಮಂಗಳವಾರ ಚುನಾವಣಾ ಆಯೋಗದ ಮೊರೆ ಹೋಗಿತ್ತು. ಕೋವಿನ್ ಪ್ಲಾಟ್ ಫಾರ್ಮ್ ನಲ್ಲಿ ತಯಾರಾಗುವ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಫೆÇೀಟೋ ಹಾಕುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅದು ಆರೋಪಿಸಿತ್ತು.
ಟಿಎಂಸಿ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿ ಬಳಿ ವರದಿ ಕೇಳಿದೆ. ಮುಖ್ಯ ಚುನಾವಣಾಧಿಕಾರಿಯ ವರದಿ ಪ್ರಕಾರ, ಆರೋಗ್ಯ ಸಚಿವಾಲಯ ಒಂದು ವ್ಯವಸ್ಥೆಯನ್ನು ಅಳವಡಿಸಿಕೊಂಡು ಅದರಲ್ಲಿ 5 ರಾಜ್ಯಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆದ ನಂತರ ನೀಡುವ ಪ್ರಮಾಣ ಪತ್ರದಲ್ಲಿ ಮಾರ್ಚ್ 27ರಿಂದ ಪ್ರಧಾನಿ ಮೋದಿಯವರ ಫೆÇೀಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಸೂಚನೆ ನೀಡಿದೆ.