ತಿರುವನಂತಪುರ: ವಿಧಾನಸಭಾ ಚುನಾವಣೆಯ ಅಂಗವಾಗಿ ಕೇರಳದಲ್ಲಿ ಸಾರ್ವಜನಿಕ ಸಭೆಗಳು ಮತ್ತು ರ್ಯಾಲಿಗಳಲ್ಲಿ ಭಾಗವಹಿಸಬಹುದಾದ ಜನರ ಸಂಖ್ಯೆಯನ್ನು ನಿಯಂತ್ರಿಸುವಂತೆ ಮುಖ್ಯ ಚುನಾವಣಾ ಅಧಿಕಾರಿ ಟೀಕರಾಮ್ ಮೀನಾ ಕರೆ ನೀಡಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಕಳುಹಿಸಲಾಗಿದೆ. ಕೊರೋನದ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ಸುರಕ್ಷತೆಯನ್ನು ಖಾತ್ರಿಪಡಿಸುವ ಪ್ರಯತ್ನಗಳ ಒಂದು ಭಾಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೋವಿಡ್ ಮಾನದಂಡಗಳು ಮತ್ತು ಸಾಮಾಜಿಕ ಅಂತರವನ್ನು ಸಾರ್ವಜನಿಕ ಸಭೆಗಳು ಮತ್ತು ಪ್ರಚಾರ ಸಭೆಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗುತ್ತದೆ.
ರಾಜ್ಯ ಆರೋಗ್ಯ ಇಲಾಖೆಯೊಂದಿಗೆ ಮುಖ್ಯ ಚುನಾವಣಾ ಅಧಿಕಾರಿ ನಡೆಸಿದ ವಿಸ್ಕøತ ಚರ್ಚೆಗಳ ಆಧಾರದ ಮೇಲೆ ಕೇರಳದ ಚುನಾವಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಲಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ಮಾರ್ಗಸೂಚಿಗಳನ್ನು ಅನುಸರಿಸಲು ನಿರ್ಬಂಧವನ್ನು ಹೊಂದಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದರು.