ವಿಟ್ಲ: ಕೇರಳದಲ್ಲಿ ಒಂದೆಡೆ ಚುನಾವಣಾ ಕಾವು ಬಿರುಸುಗೊಳ್ಳುತ್ತಿರುವಂತೆ ಕೆಲವು ರಾಜಕೀಯ ಒಳಸುಳಿಗಳು ವಕ್ಕರಿಸುವ ಸೂಚನೆಯಿದ್ದು ಗಡಿ ಪ್ರದೇಶಗಳನ್ನು ಕೇಂದ್ರೀಕರಿಸಿ ಅಕ್ರಮ ಚಟುವಟಿಕೆಗಳ ಸಾಧ್ಯತೆಯ ಸಂಶಯದ ಬೆನ್ನಲ್ಲೇ ಅಂತಹದೊಂದು ಘಟನೆಗೆ ಸಾಧ್ಯತೆ ಎಂಬಂತೆ ಘಟನೆಯೊಂದು ನಡೆದಿದೆ. ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದು ಭೀತಿ ಮೂಡಿಸಿದೆ.
ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನ ಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿದ್ದ ದುಷ್ಕರ್ಮಿಯೊರ್ವ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿ ದ್ದಾನೆ. ಕೂಡಲೇ ಕಾರ್ಯಚರಣೆ ನಡೆಸಿದ ಸಿಬ್ಬಂದಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಕೇರಳದಲ್ಲಿ ಚುನಾವಣೆಯ ಕಾವು ಏರತೊಡಗಿದ್ದು ಅಕ್ರಮ ಮತಗಳ ಮೂಲಕ ಮತಗಳನ್ನು ಬುಡಮೇಲುಗೊಳಿಸುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಸಮಾಜ ಘಾತುಕ ಯತ್ನಗಳಿಗೆ ರಾಜಕೀಯ ಪಕ್ಷಗಳು ತೊಡಗಿಸಿಕೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಘಟನೆ ಹೆಚ್ಚು ಮಹತ್ವ ಪಡೆದಿದೆ. ದುಷ್ಕರ್ಮಿಗಳು ವಿಟ್ಲ ಮೂಲಕ ಪರಾರಿಯಾಗಲು ಮುಂದಾಗುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸೈ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡ ಗಟ್ಟಲು ಮುಂದಾದಾಗ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.