ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ನಡುವೆ ಧೀರ್ಘ ಅಂತರ ಇರುವ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೋಮವಾರ ಕಳವಳ ವ್ಯಕ್ತಪಡಿಸಿದ್ದು, ಈ ಅಂತರವನ್ನು ಕಡಿಮೆ ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರಹತ ಸಾಹೂ ಅವರನ್ನು ಒತ್ತಾಯಿಸಿದ್ದಾರೆ.
ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ಇಂದು ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ವಿವಿಧ ವಿಷಯಗಳನ್ನು ಎತ್ತಿದ ರಾಜಕೀಯ ಪಕ್ಷಗಳು, 80ಕ್ಕಿಂತ ಹೆಚ್ಚು ಮತದಾರರಿಗೆ ಪೋಸ್ಟಲ್ ಬ್ಯಾಲೆಟ್ ಸೌಕರ್ಯವನ್ನು ಹೆಚ್ಚಿಸುವುದು, ಮತದಾರರಿಗೆ ಹಂಚಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸೇರಿದಂತೆ ಮತ್ತಿತರ ಸಲಹೆಗಳನ್ನು ನೀಡಿದವು.
ಪೋಸ್ಟಲ್ ಬ್ಯಾಲೆಟ್ ಸೌಕರ್ಯಗಳ ಬಗ್ಗೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಐಎಡಿಎಂಕೆಯ ಪೊಲಾಚಿ ವಿ ಜಯರಾಮನ್ ಹೇಳಿದರು. ಮತದಾನ ಮತ್ತು ಎಣಿಕೆ ದಿನಗಳ ನಡುವಿನ ನಡುವೆ ಧೀರ್ಘ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡಬೇಕು ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪ್ರತಿನಿಧಿ ಒತ್ತಾಯಿಸಿದರು.