ಕೊಚ್ಚಿ: ಬಿಜೆಪಿ ಉಮೇದ್ವಾರರ ನಾಮಪತ್ರ ತಿರಸ್ಕರಿಸಿದ ವಿರುದ್ಧ ಬಿಜೆಪಿ ಅಭ್ಯರ್ಥಿಗಳು ಇಂದು ಹ್ಯೆಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ನಡೆದಿಲ್ಲ. ನಾಳೆ ತನ್ನ ನಿಲುವನ್ನು ತಿಳಿಸುವಂತೆ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತು.
ಅರ್ಜಿಗಳನ್ನು ಸೋಮವಾರ ಮಧ್ಯಾಹ್ನ 12 ಗಂಟೆಗೆ ಪರಿಗಣಿಸಲಾಗುವುದು. ಗುರುವಾಯೂರ್ ಮತ್ತು ತಲಶೇರಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.