ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ಜರಗಿತು. ಗುರುವಾರ ಬೆಳಗ್ಗೆ ಏಕಾಹ ಭಜನೆ, ಗಣಪತಿ ಹೋಮ, ಪೂಜೆ, ಶತರುದ್ರಾಭಿಷೇಕ, ಮಧ್ಯಾಹ್ನ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ, ಅನ್ನಸಂತರ್ಪಣೆ ನಡೆಯಿತು.
ಸಾಯಂಕಾಲ ದೀಪಾರಾಧನೆ, ನೀಲೇಶ್ವರ ಗಂಗಾಧರ ಮಾರಾರ್ ಮತ್ತು ಬಳಗದವರಿಂದ ತಾಯಂಬಕ, ಶ್ರೀ ದೇವರ ಬಲಿ ಉತ್ಸವ, ನವಕಾಭಿಷೇಕ, ವಸಂತಪೂಜೆ, ಶ್ರೀಭೂತ ಬಲಿ ಉತ್ಸವ ಜರಗಿತು. ಶುಕ್ರವಾರ ಬೆಳಗ್ಗೆ ಶ್ರೀದೇವರ ಬಲಿ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಪಿಲಿಚಾಮುಂಡಿ ದೈವದ ಕೋಲ, ಅರಸಿನ ಹುಡಿ ಪ್ರಸಾದ, ಅನ್ನದಾನದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.