ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 17 ರಂದು ಸಭೆ ನಡೆಸಲಿದ್ದಾರೆ.
ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದ ಕೆಲವೆಡೆ ಭಾಗಶಃ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬಹುದಾದ ಕ್ರಮಗಲು ಹಾಗೂ ಕೊರೊನಾ ಅಲೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಕುರಿತು ಪ್ರಧಾನಿ ಮೋದಿ ದೇಶದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಕರ್ನಾಟಕದಲ್ಲೂ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚಿಂತನೆ ನಡೆಸುತ್ತಿದೆ.