ಕಾಸರಗೋಡು: ಕೇರಳ ಲೋಕಸೇವಾ ಆಯೋಗ ಮೂಲಕ ವಿವಿಧ ಉದ್ಯೋಗಕ್ಕಾಗಿ ಪರೀಕ್ಷಾ ಸಿದ್ಧತೆ ನಡೆಸುವ ಕನ್ನಡ ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಕ್ರಮ ಆರಂಭಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ವತಿಯಿಂದ ಪರಿಷತ್ ಕಚೇರಿಯಲ್ಲಿ ಶಿಕ್ಷಣ, ಉದ್ಯೋಗ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಸಾಪ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ ಭಟ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಉದ್ಯೋಗ ಪ್ರಾಪ್ತಿ ಅಭ್ಯರ್ಥಿಗಳ ಗುರಿಯಾಗಬೇಕಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡುವಲ್ಲಿ ಕಸಾಪ ಕೈಗೊಂಡಿರುವ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸುಕುಮಾರ ಆಲಂಪಾಡಿ ಉಪಸ್ಥಿತರಿದ್ದರು.
ಲೋಕಸೇವಾ ಆಯೋಗದ ನಿವೃತ್ತ ಅಧೀನ ಕಾರ್ಯದರ್ಶಿ ಗಣೇಶ್ ಪ್ರಸಾದ್ ಪಾಣೂರು ತರಗತಿ ನಡೆಸಿದರು. ಕಸಾಪ ಸದಸ್ಯ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿದರು. ಪ್ರತೀಶ್ ನಾಯ್ಕ್ ವಂದಿಸಿದರು.