ಕಾಸರಗೋಡು:ಅಭ್ಯರ್ಥಿ ಆಯ್ಕೆ, ಚುನಾವಣಾ ಪ್ರಣಾಳಿಕೆ ಬರುವುದಕ್ಕೂ ಮೊದಲು ಕೆಲವು ಮಾಧ್ಯಮಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸುವ ಮೂಲಕ ಐಕ್ಯರಂಗವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವುದು ಖಂಡನೀಯ. ಇದರ ವಿರುದ್ಧ ಕೇಂದ್ರ ಚುನಾವಣಾ
ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೇರಳದ ಪ್ರತಿಪಕ್ಷ ಮುಖಂಡ ರಮೇಶ್ ಚೆನ್ನಿತ್ತಲ ತಿಳಿಸಿದ್ದಾರೆ. ಅವರು ಕಾಸರಗೋಡು ಪ್ರೆಸ್‍ಕ್ಲಬ್ ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ'ಪಂಚಸಭಾ'ಮೀಟ್ ದಿ ಪ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಚುನಾವಣಾಪೂರ್ವ ಸಮೀಕ್ಷೆಗಳ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ, ಇದಕ್ಕಿರುವ ಇತಿಮಿತಿಗಳನ್ನು ಸೂಚಿಸಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕಿರುವುದರಿಂದ ಕೇಂದ್ರ ಚು.ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಇಂತಹ ತಲೆಬುಡವಿಲ್ಲದ ಸರ್ವೇಗಳಿಂದ ಜನರನ್ನು ಗೊಂದಲಕ್ಕೆ ಸಿಲುಕಿಸಿ ಕೆಲವು ಏಜನ್ಸಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವುದಾಗಿ ತಿಳಿಸಿದರು.
ಪ್ರೆಸ್‍ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶೀಂ, ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಡಿಸಿಸಿ ಅಧ್ಯಕ್ಷ ಹಾಕಿಂ ಕುನ್ನಿಲ್ ಉಪಸ್ಥಿತರಿದ್ದರು.