ನವದೆಹಲಿ: ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಮಧ್ಯೆ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಪ್ತವಾಗಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಶರದ್ ಪವಾರ್ ರನ್ನು ರಹಸ್ಯ ಸಭೆ ಬಗ್ಗೆ ಏನನ್ನು ಹೇಳದ ಅಮಿತ್ ಶಾ ಭಾನುವಾರ ಎಲ್ಲವನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಶರದ್ ಪವಾರ್ ಎನ್‌ಸಿಪಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸಮ್ಮಿಶ್ರ ಸರ್ಕಾರದ ಸದಸ್ಯರಾಗಿದ್ದು, ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರ ಭ್ರಷ್ಟಾಚಾರದ ಆರೋಪಗಳಿಂದ ಮುಜುಗುರವಾಗಿತ್ತು.
ಗುಜರಾತ್‌ನ ಸ್ಥಳೀಯ ಸುದ್ದಿ ಸಂಸ್ಥೆಗಳ ಪ್ರಕಾರ, ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ಅಮಿತ್ ಶಾ ಅವರನ್ನು ಅಹಮದಾಬಾದ್‌ನ ತೋಟದ ಮನೆಯಲ್ಲಿ ಭೇಟಿಯಾಗಿದ್ದರು ಎಂದು ವರದಿ ಮಾಡಿದೆ.