ನವದೆಹಲಿ: ದೇಶೀಯವಾಗಿ ತಯಾರಿಸಲಾಗಿರುವ, ಭಾರತ್ ಬಯೊಟೆಕ್‌ನ ಕೋವ್ಯಾಕ್ಸಿನ್ ಲಸಿಕೆಯು ಮನುಷ್ಯರ ಮೇಲೆ ಪ್ರಾಯೋಗಿಕ ಪರೀಕ್ಷೆ (ಕ್ಲಿನಿಕಲ್ ಟ್ರಯಲ್) ಹಂತವನ್ನು ಪೂರ್ಣಗೊಳಿಸಿದ್ದು, ಇದೀಗ ಅದಕ್ಕೆ ನಿಯಮಿತ ನಿರ್ಬಂಧಿತ ತುರ್ತು ಬಳಕೆಯ ದೃಢೀಕರಣ ನೀಡಲಾಗಿದೆ.
ಸೀರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಹೊಂದಿರುವ ಮಾನ್ಯತೆಯನ್ನೇ ಈಗ ಕೋವ್ಯಾಕ್ಸಿನ್ ಪಡೆದುಕೊಂಡಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪಾಲ್ ಅವರು ತಿಳಿಸಿದ್ದಾರೆ.
ಲಸಿಕೆಯು ಕ್ಲಿನಿಕಲ್ ಟ್ರಯಲ್ ಹಂತದ ಕೊನೆಯ ಘಟ್ಟದಲ್ಲಿ ಇದ್ದಾಗಲೇ ತುರ್ತು ಬಳಕೆಗೆ ನಿರ್ಬಂಧಿತ ಅನುಮತಿ ನೀಡಲಾಗಿತ್ತು. 19 ಲಕ್ಷ ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗಿದೆ.