ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಪೆರಡಾಲ ಉದನೇಶ್ವರ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ವೆಂಕಟಕೃಷ್ಣ ಮಕ್ಕಿಕ್ಕಾನ, ಮಾಜಿ ಆಡಳಿತ ಮೊಕ್ತೇಸರರಾದ ಟಿ ಕೆ, ನಾರಾಯಣ ಭಟ್,ಪಿ.ಜಿ ಚಂದ್ರಹಾಸ ರೈ, ನ್ಯಾಯವಾದಿ ವೆಂಕಟ್ರಮಣ ಭಟ್, ಉದನೇಶ್ವರ ಸೇವಾ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕ್ಷೇತ್ರದ ಅರ್ಚಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.