ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀಸುಬ್ರಹ್ಮಣ್ಯ ಕ್ಷೇತ್ರದ ನವೀಕರಣ ಚಟುವಟಿಕೆಗಳು ಪೂರ್ಣಗೊಂಡಿದ್ದು, ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ತಂತ್ರಿವರ್ಯರ ನೇತೃತ್ವದಲ್ಲಿ ಮೇ.21 ರಿಂದ 29ರ ವರೆಗೆ ನಡೆಯಲಿದ್ದು, ಇದರ ಪೂರ್ವಭಾವೀ ಸಭೆ ಭಾನುವಾರ ಸಂಜೆ ಶ್ರೀಕ್ಷೇತ್ರ ಪರಿಸದಲ್ಲಿ ನಡೆಯಿತು.
ಕ್ಷೇತ್ರದ ಮೊಕ್ತೇಸರ ಗೌರೀಶಂಕರ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷ ವಸಂತ ಪೈ ಬದಿಯಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ಯಾಂ ಭಟ್, ಕಾರ್ಯದರ್ಶಿ ಪಡಿಯಡ್ಪು ಮಹೇಶ್ ಭಟ್, ಕೋಶಾಧಿಕಾರಿ ಸುಂದರ ಶೆಟ್ಟಿ ಕೊಲ್ಲಂಗಾನ, ಪ್ರಧಾನ ಅರ್ಚಕ ರಾಮಕೃಷ್ಣ ಮಯ್ಯ, ಮಹಿಳಾ ಘಟಕದ ಪದಾಧಿಕಾರಿಗಳು, ಎಲ್ಲಾ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಾರಂಭದ ಸಮಗ್ರ ನಿರ್ವಹಣೆಗೆ ರೂಪುರೇಖೆ ತಯಾರಿಸಲಾಯಿತು.