ಮುಂಬೈ: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ಖಾಸಗಿ ಕಂಪನಿಗಳು ಶೇಕಡಾ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಆದರೂ, ಉತ್ಪಾದನಾ ವಲಯದ ಕೈಗಾರಿಕೆಗಳು ಮತ್ತು ಅಗತ್ಯ ಸೇವೆಗಳಿಗೆ ಈ ಹೊಸ ಮಾರ್ಗಸೂಚಿಯಿಂದ ಯಾವುದೇ ಅಡಚಣೆ ಇಲ್ಲ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದೇ ಹೋದಲ್ಲಿ ಉತ್ಪಾದನಾ ವಲಯವನ್ನೂ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಇನ್ನುಳಿದಂತೆ ಸಿನಿಮಾ ಮಂದಿರಗಳಲ್ಲಿ ಮತ್ತು ಸಭಾಂಗಣಗಳಲ್ಲಿ ಶೇ. 50ರಷ್ಟು ಜನ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 31ರ ವರೆಗೆ ಈ ನಿಯಮಗಳು ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.