ನವದೆಹಲಿ: ಬಾಟ್ಲಾ ಹೌಸ್ ಎನ್‌ಕೌಂಟರ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಸಹಚರ ಅರಿಜ್ ಖಾನ್‌ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯವು ತೀರ್ಪು ನೀಡಿದೆ.
ಬಾಟ್ಲಾ ಹೌಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಮತ್ತು ಇತರ ಅಪರಾಧಗಳ ಹಿಂದೆ ಅರಿಜ್ ಖಾನ್ ಮತ್ತು ಆತನ ಸಹಚರರ ಕೈವಾಡವಿದೆ ಎಂಬುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿತ್ತು. ಹಾಗಾಗಿ ನ್ಯಾಯಾಲಯವು ಅರಿಜ್ ಖಾನ್‌ನನ್ನು ತಪ್ಪಿತಸ್ಥ ಎಂದು ಪರಿಗಣಿಸಿತ್ತು.
'ಅರಿಜ್ ಖಾನ್‌ಗೆ ಮರಣದಂಡನೆ ನೀಡಬೇಕು' ಎಂದು ಪೊಲೀಸರ ಪರ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ ಎ.ಟಿ ಅನ್ಸಾರಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
2008ರಲ್ಲಿ ದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ ನಡೆದ ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ದೆಹಲಿಯ ವಿಶೇಷ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಶರ್ಮಾ ಅವರು ಮೃತಪಟ್ಟಿದ್ದರು.