ನವದೆಹಲಿ: ದೇಶದಲ್ಲಿ ಈ ತಿಂಗಳು ಮತ್ತೆ ಕೋವಿಡ್-19 ಕೇಸುಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ನಾಗರಿಕ ವಿಮಾನಯಾನ ಇಲಾಖೆ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ.
ವಿಮಾನದೊಳಗೆ ಮಾಸ್ಕ್ ಸರಿಯಾಗಿ ಹಾಕಿಕೊಳ್ಳದಿದ್ದರೆ ಅಥವಾ ಕೋವಿಡ್ ನಿಯಮಗಳನ್ನು ಪಾಲಿಸದಿದ್ದರೆ ಅಂತಹ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಗುವುದು, ಪ್ರಯಾಣಿಸಲು ಬಿಡುವುದಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಹಲವು ಬಾರಿ ಎಚ್ಚರಿಕೆಗಳ ಹೊರತಾಗಿಯೂ ಪ್ರಯಾಣಿಕನು ಶಿಷ್ಠಾಚಾರಗಳನ್ನು ಉಲ್ಲಂಘಿಸಿದರೆ ಅಂತಹ ಪ್ರಯಾಣಿಕರನ್ನು ಅಶಿಸ್ತಿನ ಪ್ರಯಾಣಿಕ ಎಂದು ಪರಿಗಣಿಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.