ನವದೆಹಲಿ: ಭಾರತದಲ್ಲಿ ಸೋಮವಾರ ಸಂಜೆ 7 ಗಂಟೆ ವೇಳೆಗೆ 4.27 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. ಎರಡನೇ ಹಂತದ ಲಸಿಕೆ ಅಭಿಯಾನ ಆರಂಭಗೊಂಡ ಮೊದಲ ದಿನವೇ 25 ಲಕ್ಷ ಜನರು Co-Win ಅಪ್ಲಿಕೇಷನ್ ಮೂಲಕ ತಮ್ಮ ಹೆಸರು ನೋಂದಾಯಿಸಿದ್ದಾರೆ.
ದೇಶದಲ್ಲಿ ಕಳೆದ 45 ದಿನಗಳಲ್ಲಿ 1,47,28,569 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 66,95,665 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 25,57,837 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 53,27,587 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, ಮೊದಲ ದಿನವೇ 60 ವರ್ಷಕ್ಕಿಂತ ಮೇಲ್ಪಟ್ಟ 1,28,630 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 18,850 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ 01ರಂದು ಯಾರಿಗೆ ಎಷ್ಟು ಲಸಿಕೆ?:
ಮೊದಲ ಡೋಸ್ - 2ನೇ ಡೋಸ್
ಆರೋಗ್ಯ ಕಾರ್ಯಕರ್ತರು - 25,656 - 1,01,587
ಮೊದಲ ಶ್ರೇಣಿ ಕಾರ್ಮಿಕರು - 1,52,349 - -
45 ರಿಂದ 60 ವರ್ಷದೊಳಗಿನವರು - 18,850 - -
60 ವರ್ಷ ಮೇಲ್ಪಟ್ಟವರು - 1,28,630 - -
ಒಟ್ಟು ಕೊರೊನಾವೈರಸ್ ಲಸಿಕೆ - 3,25,485 - 1,01,587
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ:
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿದೆ.