ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 14,989 ಹೊಸ ಪ್ರಕರಣಗಳು ದಾಖಲಾಗಿದ್ದು, 98 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,39,516 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,57,346 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,08,12,044 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,70,126 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ 80,302, ಕೇರಳದಲ್ಲಿ 47,569, ಕರ್ನಾಟಕದಲ್ಲಿ 5,964, ಪಂಜಾಬ್‌ನಲ್ಲಿ 5,198, ತಮಿಳುನಾಡಿನಲ್ಲಿ 3,997 ಸಕ್ರಿಯ ಪ್ರಕರಣಗಳಿವೆ.
ದೇಶದಾದ್ಯಂತ ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದೆ. ಇದುವರೆಗೆ 1,56,20,749 ಲಸಿಕೆಯನ್ನು ಪಡೆದಿದ್ದಾರೆ.