HEALTH TIPS

Covid-19 India Update: ಒಂದೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣ

        ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌-19 ದೃಢಪಟ್ಟ 16,838 ಹೊಸ ಪ್ರಕರಣಗಳು ದಾಖಲಾಗಿದ್ದು, 113 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.



       ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,73,761 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,57,548 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಇದುವರೆಗೆ 1,08,39,894 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,76,319 ಸಕ್ರಿಯ ಪ್ರಕರಣಗಳಿವೆ.

        ಮಹಾರಾಷ್ಟ್ರ, ಕೇರಳ, ಕರ್ನಾಟಕ, ಪಂಜಾಬ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ 86,359, ಕೇರಳದಲ್ಲಿ 44,734, ಪಂಜಾಬ್‌ 6,264, ಕರ್ನಾಟಕದಲ್ಲಿ 6,147, ತಮಿಳುನಾಡಿನಲ್ಲಿ 3,978 ಸಕ್ರಿಯ ಪ್ರಕರಣಗಳಿವೆ.

        ದೇಶದಾದ್ಯಂತ ಎರಡನೇ ಹಂತದ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಇದುವರೆಗೆ 1,80,05,503 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries