ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 17,921 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 133 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈ ವರೆಗೆ ಒಟ್ಟು 1,12,62,707 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,063 ಮಂದಿ ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 20,652 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,09,20,046ಕ್ಕೆ ತಲುಪಿದೆ. 1,84,598 ಸಕ್ರಿಯ ಪ್ರಕರಣಗಳಿವೆ.
ಜ.16ರಂದು ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಇಲ್ಲಿವರೆಗೂ ಭಾರತದಲ್ಲಿ 2.26ಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.