ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 22,854 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ 2 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಕರಣಗಳು ಪತ್ತೆಯಾದಂತಾಗಿದೆ.
ಒಂದೇ ದಿನ ಕೋವಿಡ್‌ನಿಂದಾಗಿ 126 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈ ವರೆಗೆ ಒಟ್ಟು 1,12,85,561 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,189 ಮಂದಿ ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 18,100 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,09,38,146ಕ್ಕೆ ತಲುಪಿದೆ. 1,89,226 ಸಕ್ರಿಯ ಪ್ರಕರಣಗಳಿವೆ.
ಜ.16ರಂದು ದೇಶದಾದ್ಯಂತ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಇಲ್ಲಿವರೆಗೂ ಭಾರತದಲ್ಲಿ 2,52,89,693 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.