ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್ ಹಿರಿಯ ನಾಯಕ ಪಿ.ಸಿ. ಚಾಕೋ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆಯ ಬಗ್ಗೆ ಆರೋಪಿಸಿರುವ ಪಿ.ಸಿ. ಚಾಕೋ, ಪಕ್ಷದೊಳಗೆ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಎಂದು ದೂರಿದರು.
ಪಿ.ಸಿ. ಚಾಕೋ ದಿಢೀರ್ ರಾಜೀನಾಮೆಯಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದೆ.