ನವದೆಹಲಿ: ವಿಶ್ವ ಜಲ ದಿನದ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು 'ಕ್ಯಾಚ್ ದಿ ರೈನ್' (ಮಳೆ ನೀರು ಹಿಡಿಯಿರಿ) ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ದೇಶದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗುವುದು. 'ಬಿದ್ದ ಜಾಗದಲ್ಲೇ, ಬಿದ್ದ ಸಮಯದಲ್ಲೇ ಮಳೆ ನೀರನ್ನು ಹಿಡಿದು ಸಂಗ್ರಹಿಸಬೇಕು' ಎಂಬುದನ್ನು ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ' ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಮಾರ್ಚ್ 22ರಿಂದ ನವೆಂಬರ್ 30ರವರೆಗೆ ಈ ಅಭಿಯಾನ ನಡೆಯಲಿದೆ. ನೀರು ಸಂರಕ್ಷಿಸುವ ಈ ಕಾರ್ಯದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಈ ಅಭಿಯಾನವು ಜನಾಂದೋಲನವಾಗಲಿದೆ ಎಂದು ತಿಳಿಸಿದೆ.
ಈ ಕಾರ್ಯಕ್ರಮದ ಬಳಿಕ ಚುನಾವಣೆ ನಡೆಯುವ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಲ ಸಂರಕ್ಷಣೆ ಬಗ್ಗೆ ಗ್ರಾಮಸಭೆಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಜನರು 'ಜಲ ಪ್ರಮಾಣ ವಚನ'ವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದೆ.