ಬದಿಯಡ್ಕ: ಕೊಲ್ಲಂಗಾನ ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಮತ್ತು ಶ್ರೀಸುಬ್ರಹ್ಮಣ್ಯ ಯಕ್ಷಗಾನ ಕಲಾಸಂಘ ಕೊಲ್ಲಂಗಾನ ಇದರ ಸಂಯುಕ್ತ ಆಶ್ರಯದಲ್ಲಿ ಸಾಂಪ್ರದಾಯಿಕ ಯಕ್ಷಗಾನ ನಾಟ್ಯ ತರಬೇತಿ ತರಗತಿಗಳು ಶ್ರೀಕ್ಷೇತ್ರ ಕೊಲ್ಲಂಗಾನದಲ್ಲಿ ಏ.14 ರಂದು ನಾಟ್ಯಗುರು ಜಯರಾಮ ಪಾಟಾಳಿ ಪಡುಮಲೆ ಅವರ ನೇತೃತ್ವದಲ್ಲಿ ಆರಂಭಗೊಳ್ಳಲಿದೆ.
ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ತಂತ್ರಿ ಗಣಾಧಿರಾಜ ಉಪಾಧ್ಯಾಯರು ಆಶೀರ್ವಚನ ನೀಡುವರು. ಗಣ್ಯರು ಉಪಸ್ಥಿತರಿರುವರು. ಮಧ್ಯಾಹ್ನ 1 ರಿಂದ ಅನ್ನದಾನ, ಅಪರಾಹ್ನ 2 ರಿಂದ ಶ್ರೀದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಯವರಿಂದ ದಕ್ಷಾಧ್ವರ ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಲಿದೆ. ತರಗತಿಗೆ ಸೇರಲಿಚ್ಚಿಸುವವರು ಬೆಳಿಗ್ಗೆ 9.30ಕ್ಕೆ ಹಾಜರಿರಬೇಕು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.