HEALTH TIPS

ಸುಕ್ಮಾ ಎನ್'ಕೌಂಟರ್: 15 ಯೋಧರು ನಾಪತ್ತೆ: ಸ್ಥಳದಲ್ಲಿ ತೀವ್ರಗೊಂಡ ಕಾರ್ಯಾಚರಣೆ

      ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಿದ ಬಳಿಕ 15 ಯೋಧರು ನಾಪತ್ತೆಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

      ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ಅಣಿಯಾಗಿತ್ತು. ಸಿಆರ್ ಪಿಎಫ್ ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ನಕ್ಸಲರ ಅಡಗುತಾಣದ ಮೇಲೆ ಭದ್ರತಾ ಪಡೆ ನುಗ್ಗುತ್ತಲೇ ಎಚ್ಚೆತ್ತ ನಕ್ಸಲರು ಗುಂಡಿನ ಸುರಿಮಳೆ ಗರೆದರು. 

      ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಈ ಭಾರೀ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಐವರು ಯೋಧರ ಪೈಕಿ ಇಬ್ಬರು ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

     ಈ ಮಧ್ಯೆ ಕಾರ್ಯಾಚರಣೆ ಬಳಿಕ 15 ಮಂದಿ ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ನಡೆದ ಸ್ಥಳಕ್ಕೆ ದೌಡಾಯಿರುವ ಭದ್ರತಾ ಪಡೆಗಳು ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

     ಈ ನಡುವೆ ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಯೋಧರು ಸೇರಿದಂತೆ 23 ಮಂದಿಯನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಛತ್ತೀಸ್ಗಢ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries